ಮಂಗಳೂರು: ಇನ್ಮುಂದೆ ಕೊರೋನಾ ಸೋಂಕಿತನ ಮನೆಯನ್ನೇ ಸೀಲ್ ಡೌನ್ ಮಾಡಲಾಗುವುದು. ಮನೆಯಲ್ಲಿರುವ ವ್ಯಕ್ತಿಗೆ ಕೊರೋನಾ ಸೋಂಕು ಇದ್ದರೆ ಮನೆ ಸೀಲ್ ಡೌನ್ ಮಾಡಲಾಗುವುದು.
ಇನ್ನು ಮುಂದೆ ಕಂಟೇನ್ಮೆಂಟ್ ಜೋನ್ ಇರುವುದಿಲ್ಲ. ಮನೆಯಲ್ಲಿರುವ ವ್ಯಕ್ತಿಗೆ ಸೋಂಕು ತಗಲಿದರೆ ಮನೆಯನ್ನು ಸೀಲ್ ಡೌನ್ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಕೇವಲ ಮನೆಯನ್ನು ಮಾತ್ರ 14 ದಿನ ಸೀಲ್ ಡೌನ್ ಮಾಡಲಾಗುವುದು. ಮಹಾರಾಷ್ಟ್ರದಿಂದ ಬಂದ ಎಲ್ಲರಿಗೂ ಟೆಸ್ಟ್ ಮಾಡಲಾಗುತ್ತಿದೆ. ಇನ್ನು ಮುಂದೆ ಲಕ್ಷಣ ಇದ್ದವರಿಗೆ ಮಾತ್ರ ಕೊರೋನಾ ಟೆಸ್ಟ್ ಮಾಡಲಾಗುವುದು. ಮಹಾರಾಷ್ಟ್ರ ದಿಂದ ಬಂದವರು ಮನೆಯಲ್ಲಿ ಕ್ವಾರಂಟೈನ್ ಇರಬೇಕು. ಅವರವರ ಮನೆಯಲ್ಲಿ ಕ್ವಾರಂಟೈನ್ ಆಗಬೇಕಿದೆ ಎಂದು ಹೇಳಿದ್ದಾರೆ.