alex Certify ಕ್ವಾರಂಟೈನ್ ವೇಳೆಯಲ್ಲೇ ನಡೆದಿದೆ ಇಂತಹ ಘಟನೆ, ಲಾಡ್ಜ್ ನಲ್ಲಿದ್ದ ದಂಪತಿಯಿಂದ ಹೀಗಾಯ್ತು…. | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ವಾರಂಟೈನ್ ವೇಳೆಯಲ್ಲೇ ನಡೆದಿದೆ ಇಂತಹ ಘಟನೆ, ಲಾಡ್ಜ್ ನಲ್ಲಿದ್ದ ದಂಪತಿಯಿಂದ ಹೀಗಾಯ್ತು….

ಶಿವಮೊಗ್ಗ: ಕ್ವಾರಂಟೈನ್ ನಲ್ಲಿದ್ದ ದಂಪತಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ ಎನ್ನಲಾಗಿದೆ.

ಮಹಾರಾಷ್ಟ್ರದ ಥಾಣೆಯಿಂದ ಬಂದಿದ್ದ ದಂಪತಿಯನ್ನು ಶಿವಮೊಗ್ಗದ ಬಿ.ಹೆಚ್. ರಸ್ತೆಯ ಲಾಡ್ಜ್ ನಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಈ ದಂಪತಿ ಲಾಡ್ಜ್ ಗೆ ಸ್ನೇಹಿತರು ಸಂಬಂಧಿಕರನ್ನು ಕರೆಸಿಕೊಂಡು ಮದುವೆ ವಾರ್ಷಿಕೋತ್ಸವ ಸಂಭ್ರಮಾಚರಣೆ ನಡೆಸಿದ್ದಾರೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಕ್ವಾರಂಟೈನ್ ನಿಯಮ ಉಲ್ಲಂಘನೆ ಆರೋಪದಡಿ ಪ್ರಕರಣ ಮುಖ್ಯ ಆರೋಗ್ಯ ಅಧಿಕಾರಿ ನೀಡಿದ ದೂರಿನ ಮೇರೆಗೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...