ಬೆಂಗಳೂರು: ಎಸ್.ಡಿ.ಪಿ.ಐ. ಮತ್ತು ಪಿಎಫ್ಐ ಸಂಘಟನೆ ನಿಷೇಧಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಿದೆ.
ಕಂದಾಯ ಸಚಿವ ಆರ್. ಅಶೋಕ್ ಈ ಕುರಿತಾಗಿ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಯಾವುದೇ ದೇಶದ್ರೋಹಿ ಸಂಘಟನೆ ಇರಬಾರದು. ಮುಖ್ಯಮಂತ್ರಿಗಳು ಸೂಚನೆ ನೀಡಿದ ನಂತರ ಪಿಎಫ್ಐ ಮತ್ತು ಎಸ್.ಡಿ.ಪಿ.ಐ. ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.
ಎರಡೂ ಸಂಘಟನೆಗಳು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿವೆ. 17 ಪ್ರಕರಣಗಳಲ್ಲಿ ನೇರವಾಗಿ ಭಾಗಿಯಾಗಿವೆ ಎಂದು ಆರೋಪಿಸಿದ ಅಶೋಕ್, ಈ ಸಂಘಟನೆಗಳ ನಿಷೇಧಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಹೇಳಿದ್ದಾರೆ.