ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಸವಾಲುಗಳಿದ್ದವು. ಆದರೆ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಸವಾಲುಗಳು ಇರಲಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಯಡಿಯೂರಪ್ಪ ಮತ್ತು ಎಸ್.ಎಂ. ಕೃಷ್ಣ ಅವರು ಅಧಿಕಾರದಲ್ಲಿದ್ದಾಗ ಬರೀ ಸವಾಲುಗಳು ಇದ್ದವು. ಇವರಿಬ್ಬರು ಸವಾಲುಗಳನ್ನು ಎದುರಿಸಿ ಸಾಧನೆ ಮಾಡಿದ್ದಾರೆ ಎಂದು ಅಶೋಕ್ ಹೇಳಿದ್ದಾರೆ.
ಕೊರೊನಾ ನಡುವೆಯೂ ಸಿಎಂ ಹೊರಗೆ ಬಂದು ಕೆಲಸ ಮಾಡುತ್ತಿದ್ದಾರೆ. ಕೊರೊನಾ ಸೋಂಕು ನಿಯಂತ್ರಿಸಲು ಶ್ರಮಿಸುತ್ತಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಒಬ್ಬರೇ ರಾಜ್ಯವನ್ನು ಸುತ್ತಾಡಿ ನೆರೆ ಸಂತ್ರಸ್ತರಿಗೆ ನೆರವಾಗಿದ್ದರು. ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಸವಾಲುಗಳು ಕೂಡ ಇರಲಿಲ್ಲ. ಅವರು ಯಾವುದೇ ಸವಾಲುಗಳನ್ನು ಎದುರಿಸಿಲ್ಲ. ಸಾಧನೆಯನ್ನೂ ಮಾಡಿಲ್ಲ ಎಂದು ಅಶೋಕ್ ಹೇಳಿದ್ದಾರೆ.