ಬೆಂಗಳೂರು: ಮಾಜಿ ಸಚಿವ ದಿ. ಜೀವರಾಜ್ ಆಳ್ವ ಮತ್ತು ನಂದಿನಿ ಆಳ್ವ ಅವರ ಪುತ್ರ ಆದಿತ್ಯ ಆಳ್ವ ಅವರ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಹೆಬ್ಬಾಳದ ಬಳಿ ಇರುವ ಆದಿತ್ಯ ಆಳ್ವ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಡ್ರಗ್ಸ್ ದಂಧೆಯ ಲಿಂಕ್ ಪ್ರಕರಣದ 6ನೇ ಆರೋಪಿಯಾಗಿರುವ ಆದಿತ್ಯ ಆಳ್ವ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು ಮನೆಯಲ್ಲಿ ಯಾರು ಇಲ್ಲದ ಹಿನ್ನೆಲೆ ಮನೆ ಬಾಗಿಲು ಒಡೆದು ಒಳಗೆ ಪ್ರವೇಶಿಸಿ ಪರಿಶೀಲನೆ ನಡೆಸಿದ್ದಾರೆ.
ಸಿಸಿಬಿ ಇನ್ಸ್ಪೆಕ್ಟರ್ ಗಳಾದ ಪುನೀತ್, ಹರೀಶ್, ಅಂಜುಮಾಲಾ ನಾಯಕ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಸರ್ಚ್ ವಾರೆಂಟ್ ಪಡೆದು ಆದಿತ್ಯ ಆಳ್ವ ಅವರ ‘ಹೌಸ್ ಆಫ್ ಲೈಫ್’ ಐಷಾರಾಮಿ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.