ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಉಪವಿಭಾಗದ 4 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 70 ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆ ಮೇಲೆ ದಾಳಿ ನಡೆಸಲಾಗಿದೆ.
ದಿಢೀರ್ ದಾಳಿ ನಡೆಸಿದ ಪೊಲೀಸರು ಮಾರಕಾಸ್ತ್ರ ಸೇರಿದಂತೆ ಹಲವು ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಅಕ್ರಮ ಚಟುವಟಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಬಂಡೆ ಮಂಜ, ಹುಸ್ಕೂರು ಶಿವ, ಬೆತ್ತನಗೆರೆ ಮಂಜ, ಪಾಯಿಸನ್ ರಾಮ, ಕಾಸಿಂ, ಶರವಣ, ನಾಗರಾಜ್, ರವಿ, ನಿಂಗೇಗೌಡ, ಹರೀಶ್, ಬೆಂಕಿ ಮಹದೇವ ಸೇರಿದಂತೆ 70ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.
ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ. ಅಕ್ರಮ ಚಟುವಟಿಕೆಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆ ಮೇರೆಗೆ ಪೊಲೀಸರು ದಾಳಿ ನಡೆಸಿ ವಾರ್ನಿಂಗ್ ಮಾಡಿ ಕಳಿಸಿದ್ದಾರೆ. ಮಾದನಾಯಕನಹಳ್ಳಿ ಠಾಣೆ ಸಿಪಿಐ ಸತ್ಯನಾರಾಯಣ, ನೆಲಮಂಗಲ ಸಿಪಿಐ ಶಿವಣ್ಣ ನೇತೃತ್ವದಲ್ಲಿ 4 ಠಾಣೆಗಳ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆನ್ನಲಾಗಿದೆ.