
ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಸಂತ್ರಸ್ತರಾದವರಿಗೆ 25 ಸಾವಿರ ರೂ. ಪರಿಹಾರ ನೀಡಲು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಕಂದಾಯ ಸಚಿವ ಆರ್. ಅಶೋಕ್, ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ ಹಾಗೂ ಅಧಿಕಾರಿಗಳ ತಂಡ ಮಳೆಯಿಂದ ಜಲಾವೃತಗೊಂಡಿದ್ದ ಹೊಸಕೆರೆಹಳ್ಳಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂತ್ರಸ್ತರಿಗೆ ಪರಿಹಾರ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ. ಶನಿವಾರ ಸಂಜೆ 50 ಸಂತ್ರಸ್ಥ ಕುಟುಂಬಗಳಿಗೆ ಪರಿಹಾರ ವಿತರಿಸಲಾಗಿದೆ ಎಂದು ಹೇಳಲಾಗಿದೆ.