ಬೆಂಗಳೂರು: ನಗರದ ಹಲವೆಡೆ ಗಾಳಿ ಸಹಿತ ಮಳೆಯಾಗಿದೆ. ಮೆಜೆಸ್ಟಿಕ್, ಮಲ್ಲೇಶ್ವರಂ, ಕಬ್ಬನ್ ಪಾರ್ಕ್, ಶಾಂತಿನಗರ, ರಿಚ್ಮಂಡ್ ಟೌನ್, ರಾಜಾಜಿನಗರ, ಕೆಆರ್ ಸರ್ಕಲ್, ಹೆಬ್ಬಾಳ, ಗುಟ್ಟಹಳ್ಳಿ, ಮಲ್ಲೇಶ್ವರಂ, ಶಿವಾನಂದ ಸರ್ಕಲ್, ಆನಂದರಾವ್ ಸರ್ಕಲ್, ಚಾಮರಾಜಪೇಟೆಯಲ್ಲಿ ಗಾಳಿ ಆಲಿಕಲ್ಲು ಸಹಿತ ಮಳೆ ಸುರಿಯುತ್ತಿದೆ.
ರಾಜ್ಯದ ಹಲವೆಡೆ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಪೂರ್ವ ಮುಂಗಾರಿನಲ್ಲಿ ಸಹಜವಾಗಿ ಮಳೆಯಾಗಲಿದೆ ಎಂದು ಹೇಳಲಾಗಿದೆ.