ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಪ್ರದೇಶ ಸೇರಿ ಹಲವೆಡೆ ಸೋಮವಾರದಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯ ಅಬ್ಬರ ಮುಂದುವರಿದಿದೆ.
ಕರಾವಳಿಯಲ್ಲಿ ಕೆಲವು ಕಡೆಗಳಲ್ಲಿ ಕೊಂಚ ಬಿಡುವು ನೀಡಿದ್ದ ಮಳೆ ಜುಲೈ 7 ರಿಂದ 11 ರವರೆಗೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು 5 ದಿನ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ, ಅರಬ್ಬಿ ಸಮುದ್ರದಿಂದ ಕರಾವಳಿ ಕಡೆಗೆ ಗಂಟೆಗೆ ಸುಮಾರು 50 ಕಿ.ಮೀ. ವೇಗದ ಗಾಳಿ ಬೀಸುತ್ತಿದ್ದು ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಶಿರಸಿ, ಸಿದ್ದಾಪು, ಶಿವಮೊಗ್ಗ, ಕೊಡಗು, ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮಳೆ ಮುಂದುವರೆದಿದ್ದು, ಜೋರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.