alex Certify ಗಮನಿಸಿ…! ಅರಬ್ಬೀಸಮುದ್ರ, ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ 5 ದಿನ ಭಾರೀ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಅರಬ್ಬೀಸಮುದ್ರ, ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ 5 ದಿನ ಭಾರೀ ಮಳೆ

ಬೆಂಗಳೂರು: ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಕಾರಣದಿಂದ ರಾಜ್ಯದಲ್ಲಿ ಮಳೆ ಆರ್ಭಟ ತೀವ್ರಗೊಂಡಿದೆ.

ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆಗಸ್ಟ್ 10 ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಅದೇ ರೀತಿ ಚಿತ್ರದುರ್ಗ, ಮೈಸೂರು, ತುಮಕೂರು, ಚಾಮರಾಜನಗರ, ಕಲಬುರ್ಗಿ, ಬೀದರ್, ರಾಯಚೂರು, ಯಾದಗಿರಿಯಲ್ಲಿ ಹೆಚ್ಚಿನ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಆಗಸ್ಟ್ 11 ರ ನಂತರ ಹಲವೆಡೆ ಮಳೆ ಕಡಿಮೆಯಾಗಲಿದ್ದು, ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಪ್ರದೇಶದಲ್ಲಿ ಮಳೆ ಮುಂದುವರಿಯಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...