alex Certify BIG NEWS: ಅರಬ್ಬೀಸಮುದ್ರ, ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ 3 ದಿನ ಭಾರೀ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅರಬ್ಬೀಸಮುದ್ರ, ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ 3 ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದ ಹಲವು ಪ್ರದೇಶದಲ್ಲಿ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ.

ಮೇ 26ರಿಂದ 28 ರ ವರೆಗೆ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಹಾಸನ, ಬೆಂಗಳೂರು, ಚಾಮರಾಜನಗರ, ಮಂಡ್ಯ, ತುಮಕೂರು ಮೊದಲಾದ ಕಡೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಉತ್ತರದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ.

ದಕ್ಷಿಣ ಒಳನಾಡಿನ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೇ 26 ರಿಂದ 28 ರ ವರೆಗೆ 3 ದಿನಗಳ ಕಾಲ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...