ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ದುರ್ಬಲಗೊಂಡಿದ್ದು, ಜೂನ್ 25ರಿಂದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಮಳೆ ಆಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಜೂನ್ 22 ಮತ್ತು 23 ರಂದು ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಭಾನುವಾರ ಮಲೆನಾಡು, ಕರಾವಳಿ ಭಾಗ ಸೇರಿ ಹಲವು ಜಿಲ್ಲೆಗಳಲ್ಲಿ ಹಾಗೂ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ.