alex Certify ಕರಾವಳಿ ಸೇರಿ ರಾಜ್ಯದ ಹಲವೆಡೆ ಇಂದಿನಿಂದ ಜುಲೈ 7ರ ವರೆಗೆ ಭಾರೀ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರಾವಳಿ ಸೇರಿ ರಾಜ್ಯದ ಹಲವೆಡೆ ಇಂದಿನಿಂದ ಜುಲೈ 7ರ ವರೆಗೆ ಭಾರೀ ಮಳೆ ಸಾಧ್ಯತೆ

 ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜುಲೈ 4ರಿಂದ 7ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕರು ಹೇಳಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಧಾರವಾಡ, ಬೀದರ್, ಬೆಳಗಾವಿ, ರಾಯಚೂರು, ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಪ್ರದೇಶದಲ್ಲಿ ಭಾರೀ ಮಳೆ ಮತ್ತು ಗಾಳಿ ಬೀಸುತ್ತಿದ್ದು ಮೀನುಗಾರರು ಕಡಲಿಗಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...