alex Certify BIG NEWS: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಚಂಡಮಾರುತ ಸಾಧ್ಯತೆ: ಹಲವೆಡೆ ಮಳೆ ಅಬ್ಬರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಚಂಡಮಾರುತ ಸಾಧ್ಯತೆ: ಹಲವೆಡೆ ಮಳೆ ಅಬ್ಬರ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಕರಾವಳಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯಾಗಬಹುದು. ವಾಯುಭಾರ ಕುಸಿತ ಚಂಡುಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ.

ಇನ್ನು ಚಂಡಮಾರುತಕ್ಕೆ ಅಂಫಾನ್ ಎಂದು ಹೆಸರಿಡಲಾಗಿದೆ. ಇದು ಈ ಋತುವಿನ ಮೊದಲ ಚಂಡಮಾರುತವಾಗಿದ್ದು ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.

ನಿನ್ನೆ ಚಿಕ್ಕಮಗಳೂರಿನಲ್ಲಿ ಸುರಿದ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೊಪ್ಪ, ಎನ್ಆರ್ ಪುರ, ಶೃಂಗೇರಿ ಭಾಗದಲ್ಲಿ ಭಾರೀ ಗಾಳಿಯೊಂದಿಗೆ ಮಳೆಯಾಗಿದೆ. ಮಳೆ ಅಬ್ಬರಕ್ಕೆ 50 ಕ್ಕೂ ಹೆಚ್ಚು ಮರಗಳು, 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ರಾತ್ರಿ ಕೊಪ್ಪ ಸಂಪೂರ್ಣ ಕತ್ತಲಲ್ಲಿ ಮುಳುಗಿದೆ.

ಹಲವೆಡೆ ಮರಗಳು ಮನೆಗಳ ಮೇಲೆ ಬಿದ್ದಿರುವುದರಿಂದ ಛಾವಣಿ ಮುರಿದು ಹಾನಿಯಾಗಿದೆ. ಹಲವು ಮನೆಗಳಿಗೆ ನೀರು ನುಗ್ಗಿದೆ. ಮನೆ ಬಳಿ ನಿಲ್ಲಿಸಿದ್ದ ವಾಹನಗಳಿಗೂ ಹಾನಿಯಾಗಿದೆ. ಶಿವಮೊಗ್ಗ, ಭದ್ರಾವತಿ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...