alex Certify ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ವ್ಯಾಪಕ ಮಳೆ: ಆರೆಂಜ್ ಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ವ್ಯಾಪಕ ಮಳೆ: ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಇಂದು ಮತ್ತು ನಾಳೆ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗಲಿದ್ದು, ನಂತರದಲ್ಲಿ ಮಳೆ ಪ್ರಮಾಣ ಕಡಿಮೆಯಾಗಲಿದೆ ಎನ್ನಲಾಗಿದೆ.

ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಬೀದರ್, ಕಲ್ಬುರ್ಗಿ, ರಾಯಚೂರು, ಚಿತ್ರದುರ್ಗ, ಬಾಗಲಕೋಟೆ, ಹಾವೇರಿ, ಗದಗ, ಬಳ್ಳಾರಿ, ವಿಜಯಪುರ, ಧಾರವಾಡ, ಬೆಳಗಾವಿ, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು ಮೊದಲಾದ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...