alex Certify BIG NEWS: ಮುಂದಿನ ಎರಡು-ಮೂರು ದಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಂದಿನ ಎರಡು-ಮೂರು ದಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ ಎರಡು-ಮೂರು ದಿನ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದೆ. ಕೇರಳ ಕರಾವಳಿ ಭಾಗದಿಂದ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವುದರಿಂದ ಎರಡು ದಿನದಲ್ಲಿ ವಾಯುಭಾರ ಕುಸಿತವಾಗಲಿದ್ದು ಇದರ ಪರಿಣಾಮ ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಮಳೆಯಾಗಲಿದೆ. ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕರು ಹೇಳಿದ್ದಾರೆ.

ವಾಯುಭಾರ ಕುಸಿತದ ಪರಿಣಾಮ ಮೇ 31 ರ ನಂತರದಲ್ಲಿ ಸಾಧಾರಣ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದ ಪ್ರಾಫ್ ನಿರ್ಮಾಣ ವಾಗಲಿದೆ ಆಂಧ್ರಪ್ರದೇಶದಿಂದ ತಮಿಳುನಾಡಿನ ವರೆಗೆ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗುವುದರಿಂದ ಮಳೆಯಾಗುವ ಸಾಧ್ಯತೆ ಇದೆ. ಜೂನ್ 1 ರ ವೇಳೆಗೆ ಕೇರಳಕ್ಕೆ ನೈಋತ್ಯ ಮುಂಗಾರು ಪ್ರವೇಶಿಸಲಿದ್ದು ಇದಾದ ಒಂದೆರಡು ದಿನಗಳ ನಂತರ ರಾಜ್ಯಕ್ಕೆ ಮುಂಗಾರು ಮಳೆ ಆಗಮನವಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...