alex Certify BIG NEWS: ಮಳೆಹಾನಿ – ನೆರೆ ಸಂತ್ರಸ್ತರಿಗೆ ತಕ್ಷಣಕ್ಕೆ 10 ಸಾವಿರ ರೂ., ಮನೆ ಕುಸಿದರೆ 5 ಲಕ್ಷ ರೂ. ಪರಿಹಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಳೆಹಾನಿ – ನೆರೆ ಸಂತ್ರಸ್ತರಿಗೆ ತಕ್ಷಣಕ್ಕೆ 10 ಸಾವಿರ ರೂ., ಮನೆ ಕುಸಿದರೆ 5 ಲಕ್ಷ ರೂ. ಪರಿಹಾರ

ಬೆಂಗಳೂರು: ರಾಜ್ಯದಲ್ಲಿ ಮಳೆ ಅವಾಂತರ ಸೃಷ್ಟಿಸಿದ್ದು ಅನೇಕ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಭಾರಿ ಹಾನಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತರಾದ ಕುಟುಂಬದವರಿಗೆ ತಕ್ಷಣವೇ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಹಿಂದಿನ ರೀತಿಯಲ್ಲೇ ಪರಿಹಾರ ವಿತರಿಸಲು ಅವರು ತಿಳಿಸಿದ್ದು ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10,000 ರೂ.,  ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ರೂ. ಮತ್ತು ಭಾಗಶಃ ಹಾನಿಯಾಗಿದ್ದಲ್ಲಿ ಪರಿಶೀಲನೆ ನಡೆಸಿ ಹಾನಿಗೆ ತಕ್ಕಂತೆ ಪರಿಹಾರ ವಿತರಿಸಬೇಕು ಎಂದು ತಿಳಿಸಿದ್ದಾರೆ.

ಹಳ್ಳಿಗಳಲ್ಲಿನ ಶಾಲಾ-ಕಾಲೇಜುಗಳನ್ನು ನಿರಾಶ್ರಿತರ ಕೇಂದ್ರಗಳಾಗಿ ಮಾರ್ಪಡಿಸಿ ಅಗತ್ಯ ಸೌಲಭ್ಯ ಕಲ್ಪಿಸುವಂತೆ ನಿರ್ದೇಶಿಸಿದ್ದಾರೆ. ಬೆಳೆ ಹಾನಿ ಬಗ್ಗೆ ಸಮೀಕ್ಷೆ ಮಾಡಿ ವರದಿ ಸಲ್ಲಿಸಬೇಕು ಪ್ರತಿದಿನವೂ ಹಾನಿಯ ಬಗ್ಗೆ ವರದಿ ನೀಡಬೇಕೆಂದು ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...