alex Certify ಬಿಗ್ ನ್ಯೂಸ್: ನಾಳೆಯಿಂದ ಭಾರೀ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ನಾಳೆಯಿಂದ ಭಾರೀ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದೆ. ಕರಾವಳಿ ಪ್ರದೇಶದಲ್ಲಿ ಭಾನುವಾರ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಒಳನಾಡು ಪ್ರದೇಶದ ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಚಿಕ್ಕಮಗಳೂರು, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಭಾನುವಾರ, ಸೋಮವಾರ ಮತ್ತು ಮಂಗಳವಾರ ಕರಾವಳಿ ಮಲೆನಾಡು ಸೇರಿ ಹಲವೆಡೆ ಹೆಚ್ಚಿನ ಮಳೆಯಾಗಲಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...