ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ಮಲೆನಾಡು, ಕರಾವಳಿ ಹಾಗೂ ದಕ್ಷಿಣ, ಉತ್ತರ ಒಳನಾಡು ಭಾಗದ ಹಲವೆಡೆ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಭಾರೀ ಮಳೆಯ ಕಾರಣ ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಅದೇ ರೀತಿ ಶಿವಮೊಗ್ಗ, ಚಿಕ್ಕಮಗಳೂರು, ಧಾರವಾಡ, ಬೆಳಗಾವಿ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಉತ್ತಮ ಮಳೆ ಆಗಬಹುದು ಎಂದು ಹೇಳಲಾಗಿದೆ.