alex Certify ಮಳೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಮಂಗಳೂರು: ಸೋಮವಾರ ಮತ್ತು ಮಂಗಳವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಸಿಡಿಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆಯಿಂದ ಈ ಕುರಿತು ಮಾಹಿತಿ ನೀಡಲಾಗಿದೆ. ಸದ್ಯ ಬಿಸಿಲಿನ ವಾತಾವರಣ ಮುಂದುವರೆದಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ಅಂಫಾನ್ ಚಂಡಮಾರುತದ ಅಬ್ಬರ ಕ್ಷೀಣಿಸಿದ್ದು ಮುಂದಿನ ದಿನಗಳಲ್ಲಿ ಅದರ ಪರಿಣಾಮ ಇರುವುದಿಲ್ಲ. ಸದ್ಯಕ್ಕೆ ಯಾವುದೇ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಇಲ್ಲವೆಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಮೇ 25 ಮತ್ತು 26ರಂದು ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಗುಡುಗು-ಸಿಡಿಲಿನ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...