ಜೂನ್ 1 ರಂದು ನಿರೀಕ್ಷೆಯಂತೆ ಕೇರಳಕ್ಕೆ ಮುಂಗಾರು ಪ್ರವೇಶಿಸಿದ್ದು, ರಾಜ್ಯಕ್ಕೆ ಎರಡು ದಿನಗಳಲ್ಲಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು.
ಮುಂಗಾರು ಆಗಮನಕ್ಕೆ ಪೂರಕವಾದ ವಾತಾವರಣ ಸೃಷ್ಟಿಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿತ್ತು. ಆದರೆ ಬುಧವಾರ ಮುಂಗಾರು ರಾಜ್ಯಕ್ಕೆ ಎಂಟ್ರಿ ಕೊಟ್ಟಿಲ್ಲ. ಮುಂದಿನ 24 ಗಂಟೆಗಳಲ್ಲಿ ಕೇರಳದ ಇನ್ನಷ್ಟು ಪ್ರದೇಶಗಳಿಗೆ ವ್ಯಾಪಿಸಲಿರುವ ಮುಂಗಾರು ನಂತರದಲ್ಲಿ ರಾಜ್ಯಕ್ಕೆ ಬರುವ ಸಾಧ್ಯತೆ ಇದೆ.
ಅರಬ್ಬಿ ಸಮುದ್ರದಲ್ಲಿ ಉಂಟಾದ ʼನಿಸರ್ಗʼ ಚಂಡಮಾರುತ ಉತ್ತರ ಭಾಗದತ್ತ ಮುಂದುವರೆದಿದ್ದು, ಇದರ ಪರಿಣಾಮ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶದಲ್ಲಿ ಮಳೆಯಾಗಿದೆ. ರಾಜ್ಯಕ್ಕೆ ಮುಂಗಾರು ಆಗಮನಕ್ಕೆ ಪೂರಕವಾದ ವಾತಾವರಣ ಸೃಷ್ಟಿಯಾಗಿದೆ. ಬುಧವಾರವೇ ಮುಂಗಾರು ಎಂಟ್ರಿ ಕೊಡಬೇಕಿತ್ತಾದರೂ ಇನ್ನು ಬಂದಿಲ್ಲ. ಶೀಘ್ರವೇ ಮುಂಗಾರು ಮಳೆ ಆಗಮನವಾಗಬಹುದು ಎಂದು ಹೇಳಲಾಗಿದೆ.
ಜೂನ್ 7 ರವರೆಗೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅದೇ ರೀತಿ ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಜೂನ್ 4 ರಂದು, ಜೂನ್ 7 ರವರೆಗೆ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.