alex Certify ಬಿಗ್ ನ್ಯೂಸ್: ಮುಂಗಾರು ಆಗಮನದ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಹಿ ಸುದ್ದಿ, ಕೇರಳಕ್ಕೆ ಮಾನ್ಸೂನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಮುಂಗಾರು ಆಗಮನದ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಹಿ ಸುದ್ದಿ, ಕೇರಳಕ್ಕೆ ಮಾನ್ಸೂನ್

ಮುಂಗಾರು ಮಳೆ ಆಗಮನಕ್ಕೆ ಪೂರಕವಾದ ವಾತಾವರಣ ಇದ್ದು ಜೂನ್ 1 ರ ಸೋಮವಾರ ನೈರುತ್ಯ ಮುಂಗಾರು ಮಾರುತಗಳು ಕೇರಳ ಪ್ರವೇಶಿಸಲು ಸಜ್ಜಾಗಿವೆ.

ಕೇರಳದ ಅಂಚಿನಲ್ಲಿರುವ ಮುಂಗಾರು ಮಾರುತಗಳು ಕೇರಳವನ್ನು ಪ್ರವೇಶಿಸಲಿದ್ದು ಜೂನ್ 5 ರ ವೇಳೆಗೆ ರಾಜ್ಯಕ್ಕೆ ಎಂಟ್ರಿ ಕೊಡಲಿದೆ. ಅರಬ್ಬಿಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಭಾರಿ ಮಳೆಯಾಗುತ್ತಿದ್ದು ವಾಯುಭಾರ ಕುಸಿತ ಮುಂದಿನ 24 ಗಂಟೆಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಇದರ ಪರಿಣಾಮ ರಾಜ್ಯದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಹಾರಾಷ್ಟ್ರ, ಗುಜರಾತ್ ನಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಮಳೆ ವಾತಾವರಣ ಇರುವುದರಿಂದ ಕೃಷಿ ಚಟುವಟಿಕೆ ಚುರುಕು ಪಡೆದುಕೊಂಡಿದ್ದು, ಈಗಾಗಲೇ ಕೆಲವೆಡೆ ಬಿತ್ತನೆ ಶುರುವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...