ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ನೈರುತ್ಯ ಮುಂಗಾರು ಚುರುಕುಗೊಂಡಿದೆ. ಜೂನ್ 14, 15 ರಂದು ಕರಾವಳಿ ಪ್ರದೇಶದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜೂನ್ 14, 15ರಂದು ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಗಂಟೆಗೆ 45 ರಿಂದ 55 ಕಿಲೋಮೀಟರ್ ವೇಗದ ಗಾಳಿ ಬೀಸುತ್ತಿರುವುದರಿಂದ ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ರಾಜ್ಯದ ಹಲವೆಡೆ ಮುಂಗಾರು ಮಳೆ ಚುರುಕುಗೊಂಡಿದ್ದು ಬಿಡುವಿನ ನಡುವೆ ಕೃಷಿ ಚಟುವಟಿಕೆಗಳು ಗರಿಗೆದರಿವೆ.