ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು ಕಳೆದ ಮೂರ್ನಾಲ್ಕು ದಿನಗಳಿಂದ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ನದಿ ಹಳ್ಳಕೊಳ್ಳಗಳು ತುಂಬಿ ಹರಿದು ನೆರೆ ಹಾವಳಿ ಉಂಟಾಗಿದೆ.
ಮಹಾಮಳೆಯಿಂದ ಜನ ತತ್ತರಿಸಿಹೋಗಿದ್ದಾರೆ. ಆಗಸ್ಟ್ 18 ರಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಅದೇ ರೀತಿ ಬೀದರ್, ಧಾರವಾಡ, ಬೆಳಗಾವಿ, ಕಲಬುರ್ಗಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಮೀನುಗಾರರಿಗೆ ಕಡಲಿಗೆ ಇಳಿಯದಂತೆ ಸೂಚಿಸಲಾಗಿದೆ.