alex Certify ಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ಶಿವಮೊಗ್ಗ, ದಾವಣಗೆರೆ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆಯಾಗಿದ್ದು ಅಪಾರ ಹಾನಿಯುಂಟಾಗಿದೆ.

ಹಲವೆಡೆ ಗಾಳಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು ಮರಗಳು ಬಿದ್ದು ಮನೆಗಳು ಜಖಂಗೊಂಡಿವೆ. ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಅಡಿಕೆ ಬಾಳೆ ಗಿಡಗಳಿಗೆ ಹಾನಿಯಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಬರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಭಾರಿ ಹಾನಿ ಉಂಟಾಗಿದೆ.

ದಾವಣಗೆರೆ ಜಿಲ್ಲೆಯ ಜಗಳೂರು, ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ ಸೇರಿದಂತೆ ಹಲವೆಡೆ ಮಳೆಯಾಗಿದೆ ಇನ್ನು ಕರಾವಳಿ ಭಾಗದಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಕರಾವಳಿ ಭಾಗದ ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಲಿದೆ. ಅದೇ ರೀತಿ ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

ಮೇ 12 ರಂದು ಗುಡುಗು ಸಿಡಿಲು ಸಹಿತ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಮೇ 13, 14 ರಂದು ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...