alex Certify ರಾಜ್ಯದ ಹಲವೆಡೆ ಗುಡುಗು ಗಾಳಿ ಸಹಿತ ಭಾರಿ ಮಳೆ ಆರ್ಭಟಕ್ಕೆ ತತ್ತರಿಸಿದ ಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಹಲವೆಡೆ ಗುಡುಗು ಗಾಳಿ ಸಹಿತ ಭಾರಿ ಮಳೆ ಆರ್ಭಟಕ್ಕೆ ತತ್ತರಿಸಿದ ಜನ

ಬೆಂಗಳೂರು: ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗಿದೆ. ಗುಡುಗು-ಸಿಡಿಲಿನ ಆರ್ಭಟದೊಂದಿಗೆ ಭಾರೀ ಮಳೆಯಾಗಿ ಹಲವೆಡೆ ಮರಗಳು ಉರುಳಿವೆ.

ಧಾರವಾಡ-ಹುಬ್ಬಳ್ಳಿ ಅವಳಿ ನಗರದಲ್ಲಿ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಆಲಿಕಲ್ಲು ಸಹಿತ ಜೋರು ಮಳೆಯಾಗಿದ್ದು ಅರ್ಧ ಗಂಟೆಗೂ ಅಧಿಕ ಕಾಲ ಸುರಿದ ಮಳೆಯಿಂದ ಹಲವೆಡೆ ಮರಗಳು ನೆಲಕ್ಕುರುಳಿವೆ.

ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದೆ. ಬಿರುಗಾಳಿಯೊಂದಿಗೆ ಒಂದು ಗಂಟೆಗೂ ಅಧಿಕ ಕಾಲ ಮಳೆಯಾಗಿದ್ದು ಶಹಾಪುರ, ಸುರಪುರ, ಹುಣಸಗಿ ಸೇರಿದಂತೆ ಹಲವೆಡೆ ಬಿರುಗಾಳಿ ಆರ್ಭಟದೊಂದಿಗೆ ಮಳೆಯಾಗಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಯ ಹಲವೆಡೆ ಜೋರು ಮಳೆಯಾಗಿದೆ. ಭಾರಿ ಗಾಳಿ ಮಳೆಯಾದ ಕಾರಣ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...