ಬೆಂಗಳೂರು: ಜೂನ್ 30ರ ಇಂದು ಮತ್ತು ಜುಲೈ 1ರ ನಾಳೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಮಲೆನಾಡು, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು, ರಾಮನಗರ, ಶಿವಮೊಗ್ಗ, ತುಮಕೂರು, ಹಾಸನ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ.
ಕರಾವಳಿ ಪ್ರದೇಶದಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ಗಾಳಿ ಬೀಸುತ್ತಿದ್ದು, ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.