alex Certify 4 -5 ದಿನದಲ್ಲಿ ಮುಂಗಾರು: ನಾಳೆಯಿಂದ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

4 -5 ದಿನದಲ್ಲಿ ಮುಂಗಾರು: ನಾಳೆಯಿಂದ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬೀಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಜಾಸ್ತಿಯಾಗಿದ್ದು ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಲ್ಲಿ ಮಳೆಯಾಗಿದೆ.

ಜೂನ್ ಮೊದಲ ವಾರ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದ್ದು, ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವುದರಿಂದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.

ಇದೇ ವೇಳೆ ಬಂಗಾಳಕೊಲ್ಲಿಯಲ್ಲಿಯೂ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದ್ದು ಮುಂಗಾರು ಮಾರುತ ಪ್ರವೇಶಕ್ಕೆ ಅನುಕೂಲಕರವಾದ ವಾತಾವರಣ ನಿರ್ಮಾಣವಾಗತೊಡಗಿದೆ. ಜೂನ್ 1 ರ ವೇಳೆಗೆ ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದ್ದು ಒಂದೆರಡು ದಿನಗಳಲ್ಲಿ ಕರ್ನಾಟಕಕ್ಕೆ ಪ್ರವೇಶಿಸಬಹುದು ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಜಿ.ಎಸ್. ಶ್ರೀನಿವಾಸರೆಡ್ಡಿ ಹೇಳಿದ್ದಾರೆ.

ಮೇ 31 ರಿಂದ ಜೂನ್ 2 ರ ವರೆಗೆ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ. ಜೂನ್ 1 ರವರೆಗೆ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಅದೇ ರೀತಿ ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...