ಯಾದಗಿರಿ: ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀಗಳು ರಾಜೀನಾಮೆ ನೀಡು ಎಂದು ಸೂಚಿಸಿದಲ್ಲಿ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ಸುರಪುರ ಬಿಜೆಪಿ ಶಾಸಕ ರಾಜುಗೌಡ ಹೇಳಿದ್ದಾರೆ.
ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ವಿಚಾರವಾಗಿ ಮಾತನಾಡಿ, ನಾನು ವಿರೋಧ ಪಕ್ಷದಲ್ಲಿ ಇದ್ದಾಗಲೂ ಇದೇ ಮಾತನ್ನು ಹೇಳಿದ್ದೆ. ಈಗಲೂ ಅದೇ ಮಾತನ್ನು ಹೇಳುತ್ತಿದ್ದೇನೆ. ಸ್ವಾಮೀಜಿಗಳು ಹೇಳಿದ ಮಾತಿಗೆ ಈಗಲೂ ಬದ್ಧವಾಗಿದ್ದೇನೆ. ಅವರು ಹೇಳಿದ್ದನ್ನು ಪಾಲಿಸುತ್ತೇನೆ. ಸಮಾಜದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತೇವೆ. ಸ್ವಾಮೀಜಿಯವರ ಸೂಚನೆ ಪಾಲಿಸುತ್ತೇವೆ ಎಂದು ಅವರು ಹೇಳಿದ್ದಾರೆ.