alex Certify ಮತ್ತೆ ಕಾಂಗ್ರೆಸ್ – ಜೆಡಿಎಸ್ ಮೈತ್ರಿ, ರಾಜ್ಯಸಭೆಗೆ ಘಟಾನುಘಟಿ ನಾಯಕರು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಕಾಂಗ್ರೆಸ್ – ಜೆಡಿಎಸ್ ಮೈತ್ರಿ, ರಾಜ್ಯಸಭೆಗೆ ಘಟಾನುಘಟಿ ನಾಯಕರು…?

ಜೂನ್ 19 ರಂದು ರಾಜ್ಯಸಭೆ ಚುನಾವಣೆ ನಡೆಯಲಿದ್ದು, ಬಿಜೆಪಿಗೆ ಎರಡು ಸ್ಥಾನಗಳು ಸಿಗಲಿವೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯೊಂದಿಗೆ ತಲಾ ಒಂದು ಸ್ಥಾನಗಳನ್ನು ಹಂಚಿಕೊಳ್ಳುವ ಸಾಧ್ಯತೆಯಿದೆ.

ಕಾಂಗ್ರೆಸ್ ನಿಂದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಜೆಡಿಎಸ್ ನಿಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಲು ಚಿಂತನೆ ನಡೆದಿದೆ ಎನ್ನಲಾಗಿದೆ.

ಕಾಂಗ್ರೆಸ್ ಬೆಂಬಲದೊಂದಿಗೆ ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಸಕ್ತಿ ತೋರಿದ್ದಾರೆ ಎನ್ನಲಾಗಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಹೊಂದಿರುವ ಶಾಸಕರ ಸಂಖ್ಯಾಬಲ ಆಧರಿಸಿ ಕಾಂಗ್ರೆಸ್ ಒಂದು ಸ್ಥಾನವನ್ನು ಸುಲಭವಾಗಿ ಗೆಲ್ಲಲಿದೆ. ಜೆಡಿಎಸ್‌ ನಿಂದ ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಲು ಬೆಂಬಲ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಹಾಲಿ ಸದಸ್ಯರಾಗಿದ್ದರೂ ಕಾಂಗ್ರೆಸ್ ನಿಂದ ಟಿಕೆಟ್ ನಿರಾಕರಿಸಲ್ಪಟ್ಟಿದ್ದ ತುಮಕೂರು ಕ್ಷೇತ್ರದ ಮುದ್ದಹನುಮೇಗೌಡರಿಗೆ ರಾಜ್ಯಸಭೆ ಟಿಕೆಟ್ ನೀಡುವ ಚರ್ಚೆ ನಡೆದಿದೆ ಎನ್ನಲಾಗಿದೆ. ಆದರೆ ಬಹುತೇಕ ಮಲ್ಲಿಕಾರ್ಜುನ ಖರ್ಗೆ ಮತ್ತು ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ವಲಯದಲ್ಲಿ ಚರ್ಚೆ ನಡೆದಿದ್ದು, ಉಭಯ ಪಕ್ಷಗಳ ನಾಯಕರು ಸಭೆ ಸೇರಿ ಚರ್ಚಿಸಿದ ನಂತರ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...