ಬೆಂಗಳೂರು: ರಾಜ್ಯಸಭೆಗೆ ರಾಜ್ಯದಿಂದ ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ಇಬ್ಬರು, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಿಂದ ಒಬ್ಬರು ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡ, ಬಿಜೆಪಿ ಸದಸ್ಯರಾದ ಅಶೋಕ ಗಸ್ತಿ, ಈರಣ್ಣ ಕಡಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.