alex Certify ಸೋಂಕು ರಹಿತ ರಾಮನಗರಕ್ಕೂ ಕೊರೋನಾ, ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೋಂಕು ರಹಿತ ರಾಮನಗರಕ್ಕೂ ಕೊರೋನಾ, ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ರಾಮನಗರ ಜೈಲಿಗೆ ಸ್ಥಳಾಂತರ ಮಾಡಲಾಗಿದ್ದ ಪಾದರಾಯನಪುರ ಗಲಾಟೆ ಆರೋಪಿಗಳಲ್ಲಿ ಇಬ್ಬರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇಬ್ಬರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಸೋಂಕು ರಹಿತವಾಗಿದ್ದ ರಾಮನಗರದಲ್ಲಿ ಸೋಂಕು ಕಂಡು ಬಂದಿದ್ದಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರೋಪಿಗಳನ್ನು ತಕ್ಷಣವೇ ರಾಮನಗರ ಜೈಲಿನಿಂದ ಸ್ಥಳಾಂತರ ಮಾಡಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ರಾಮನಗರ ಜೈಲಿನಲ್ಲಿ ಇರಿಸಲಾಗಿರುವ ಕೈದಿಗಳಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಕೈದಿಗಳನ್ನು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಕೂಡಲೇ ಸ್ಥಳಾಂತರ ಮಾಡಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ರಾಮನಗರ ಜಿಲ್ಲೆಯ ಜನತೆ ಭಯಗೊಂಡಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ. ರಾಜ್ಯದ 8 ಜಿಲ್ಲೆಗಳು ಮಾತ್ರ ಸೋಂಕು ಮುಕ್ತವಾಗಿದ್ದು ಅವುಗಳಲ್ಲಿ ರಾಮನಗರ ಕೂಡ ಒಂದಾಗಿದೆ. ಸರ್ಕಾರದ ಎಡವಟ್ಟಿನ ನಿರ್ಧಾರದಿಂದ ರಾಮನಗರದಲ್ಲಿ ಸೋಂಕು ಹರಡುವ ಆತಂಕ ಎದುರಾಗಿದೆ. ಸರ್ಕಾರ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಪರಿಸ್ಥಿತಿ ನಿರ್ವಹಿಸಬೇಕೆಂದು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...