alex Certify ರಾಮನಗರ ಜೈಲಲ್ಲಿದ್ದ ಪಾದರಾಯನಪುರ ಪುಂಡರಿಬ್ಬರಿಗೆ ಕೊರೋನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಮನಗರ ಜೈಲಲ್ಲಿದ್ದ ಪಾದರಾಯನಪುರ ಪುಂಡರಿಬ್ಬರಿಗೆ ಕೊರೋನಾ

ಬೆಂಗಳೂರು: ಕ್ವಾರಂಟೈನ್ ಮಾಡುವ ವೇಳೆ ಬೆಂಗಳೂರಿನ ಪಾದರಾಯನಪುರದಲ್ಲಿ ಗಲಭೆ ಸೃಷ್ಟಿಸಿ ಬಂಧಿತರಾಗಿದ್ದ ಆರೋಪಿಗಳ ಪೈಕಿ ಇಬ್ಬರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.

ಇಬ್ಬರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬಂಧಿಸಲಾಗಿದ್ದ ಆರೋಪಿಗಳನ್ನು ರಾಮನಗರ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಸೋಂಕು ರಹಿತವಾಗಿದ್ದ ರಾಮನಗರಕ್ಕೆ ಆರೋಪಿಗಳನ್ನು ಶಿಫ್ಟ್ ಮಾಡುವುದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಸಂಸದ ಡಿ.ಕೆ. ಸುರೇಶ್ ವಿರೋಧ ವ್ಯಕ್ತಪಡಿಸಿದ್ದರು.

ಈಗ ಇಬ್ಬರು ಆರೋಪಿಗಳಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದ್ದು, ಅವರನ್ನು ರಾಮನಗರದಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...