alex Certify ಕೊರೊನಾ ಪಾಸಿಟಿವ್: ರಂಭಾಪುರಿ ಶ್ರೀ, ಸಚಿವ ಕೆ.ಎಸ್. ಈಶ್ವರಪ್ಪ ಚೇತರಿಕೆಗೆ ಸಿಎಂ ಹಾರೈಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಪಾಸಿಟಿವ್: ರಂಭಾಪುರಿ ಶ್ರೀ, ಸಚಿವ ಕೆ.ಎಸ್. ಈಶ್ವರಪ್ಪ ಚೇತರಿಕೆಗೆ ಸಿಎಂ ಹಾರೈಕೆ

ಬಾಳೆಹೊನ್ನೂರು ಶ್ರೀ ರಂಭಾಪುರಿ ಮಠದ ಶ್ರೀ ಪ್ರಸನ್ನ ರೇಣುಕ ವೀರಸೋಮೇಶ್ವರ ಜಗದ್ಗುರುಗಳಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಸೋಮವಾರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡು ಸ್ವಾಮೀಜಿ ಅವರಿಗೆ ಪಾಸಿಟಿವ್ ವರದಿ ಇರುವುದು ಗೊತ್ತಾಗುತ್ತಿದ್ದಂತೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶ್ರೀಗಳ ಚೇತರಿಕೆಗೆ ಸಿಎಂ ಯಡಿಯೂರಪ್ಪ ಪ್ರಾರ್ಥಿಸಿದ್ದಾರೆ. ರಂಭಾಪುರಿ ಪೀಠದ ಪರಮಪೂಜ್ಯ ಶ್ರೀ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಅದೇ ರೀತಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅತಿ ಶೀಘ್ರದಲ್ಲಿ ಕೊರೋನಾದಿಂದ ಸಂಪೂರ್ಣ ಗುಣಮುಖರಾಗಿ ಮತ್ತೆ ತಮ್ಮ ಎಂದಿನ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...