alex Certify ಸಿದ್ದರಾಮಯ್ಯರನ್ನು ಹಾಡಿ ಹೊಗಳಿ ಡಿಕೆಶಿಗೆ ರಮೇಶ್ ಜಾರಕಿಹೊಳಿ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದರಾಮಯ್ಯರನ್ನು ಹಾಡಿ ಹೊಗಳಿ ಡಿಕೆಶಿಗೆ ರಮೇಶ್ ಜಾರಕಿಹೊಳಿ ಟಾಂಗ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ್ಳೆಯ ನಾಯಕ. ಅವರ ಬಗ್ಗೆ ಏನೂ ಹೇಳುವುದಿಲ್ಲ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಒಳ್ಳೆಯ ನಾಯಕರು. ಅವರು ಬಗ್ಗೆ ಏನೂ ಹೇಳುವುದಿಲ್ಲ. ಬೇರೆ ಪಕ್ಷದಲ್ಲಿದ್ದರೂ ಸಿದ್ದರಾಮಯ್ಯನವರ ಬಗ್ಗೆ ನನಗೆ ಗೌರವವಿದೆ. ಅವರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಪಕ್ಷದಲ್ಲಿ ಏಕಾಂಗಿಯಾಗಿರುವುದರಿಂದ ಹತಾಶೆಗೆ ಒಳಗಾಗಿ ಏನೇನೋ ಮಾತನಾಡುತ್ತಿದ್ದು, ಅವರಿಗೆ ಸೂಕ್ತ ವೇದಿಕೆಯಲ್ಲಿ ಉತ್ತರ ನೀಡುತ್ತೇನೆ ಎಂದು ರಮೇಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.

ಸಂದರ್ಭಕ್ಕೆ ಅನುಸಾರವಾಗಿ ಚಾಮರಾಜನಗರದಲ್ಲಿ ನಾನು ಮಾತನಾಡಿದ್ದೇನೆ. ಅದನ್ನು ಪದೇ ಪದೇ ಹೇಳಿದರೆ ಮಹತ್ವ ಇರುವುದಿಲ್ಲ. ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದು ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿದ ನಂತರ ಈ ಬಗ್ಗೆ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...