ದಾವಣಗೆರೆ: ಅಪ್ರಾಪ್ತೆ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ದಾವಣಗೆರೆ ಜಿಲ್ಲೆ ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ವಿಷಯವನ್ನು ಮನೆಯಲ್ಲಿ ಹೇಳದಂತೆ ಆರೋಪಿ, ಬಾಲಕಿಗೆ ಬೆದರಿಕೆ ಹಾಕಿದ್ದಾನೆ.
ಹುಲ್ಲು ತರಲೆಂದು ಬಾಲಕಿಯನ್ನು ಕರೆದುಕೊಂಡು ಹೋದ ಸಂಬಂಧಿ ಅತ್ಯಾಚಾರ ಎಸಗಿ ಬೆದರಿಕೆ ಹಾಕಿದ್ದಾನೆ. ಬಾಲಕಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಜಗಳೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.