ಧಾರವಾಡ ಜಿಲ್ಲೆ ನವಲಗುಂದ ತಾಲ್ಲೂಕಿನ ಗ್ರಾಮವೊಂದರಲ್ಲಿ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ.
ಅದೇ ಗ್ರಾಮದ 22 ವರ್ಷದ ಯುವಕ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಾನೆ. ಯಾರಿಗೂ ವಿಷಯ ತಿಳಿಸದಂತೆ ಕೊಲೆ ಬೆದರಿಕೆ ಹಾಕಿದ್ದಾನೆನ್ನಲಾಗಿದೆ.
ಬಾಲಕಿ ಮನೆಯವರಿಗೆ ಮಾಹಿತಿ ನೀಡಿದ್ದು ಪೋಷಕರು ಧಾರವಾಡ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.