alex Certify ಹೊಸ ರೇಂಜ್ ರೋವರ್ ಕಾರಿನೆದುರು ನಿಂತು ಅಭಿಮಾನಿಗಳಿಗೆ ಧನ್ಯವಾದ ಹೇಳಿದ ನಟಿ ರಶ್ಮಿಕಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ರೇಂಜ್ ರೋವರ್ ಕಾರಿನೆದುರು ನಿಂತು ಅಭಿಮಾನಿಗಳಿಗೆ ಧನ್ಯವಾದ ಹೇಳಿದ ನಟಿ ರಶ್ಮಿಕಾ

ಸ್ಯಾಂಡಲ್ ವುಡ್ ಬೆಡಗಿ ರಶ್ಮಿಕಾ ಮಂದಣ್ಣ ಈಗ ದಕ್ಷಿಣ ಭಾರತದ ಬಹು ಬೇಡಿಕೆಯ ನಟಿ. ಅತಿ ಕಡಿಮೆ ಅವಧಿಯಲ್ಲಿ ಪ್ರಸಿದ್ಧರಾದವರು. ಬುಧವಾರ ಅಪರೂಪದ ಫೋಟೋವೊಂದನ್ನು ಪೋಸ್ಟ್ ಮಾಡಿ ತಮ್ಮ ಅಭಿಮಾನಿಗಳಿಗೆ ಅಭಿನಂದನೆ ಹೇಳಿದ್ದಾರೆ.

ತಮ್ಮ ಹೊಸ ಸ್ವಂಕಿ ಬ್ಲ್ಯಾಕ್ ರೇಂಜ್ ರೋವರ್ ಕಾರಿನ ಎದುರು ಅತಿ ಉತ್ಸಾಹದಿಂದ ನಿಂತಿರುವ ಫೋಟೋಗಳನ್ನು ಇನ್ಸ್ಟಾಗ್ರಾಂ ಹಾಗೂ ಟ್ವೀಟರ್ ಖಾತೆಗಳಲ್ಲಿ ಅಪ್ ಲೋಡ್ ಮಾಡಿದ್ದಾರೆ. “ಈ ಖುಷಿಯನ್ನು ನಾನು ನಿಮ್ಮೊಂದಿಗೆ ಹಂಚಿಕೊಳ್ಳಲೇ ಬೇಕು. ಏಕೆಂದರೆ, ನೀವು ಈ ಪ್ರಯಾಣದ ಭಾಗವಾಗಿದ್ದೀರಿ. ಅದಕ್ಕಾಗಿ ನಾನು ನಿಮಗೆ ಧನ್ಯವಾದ ಹೇಳುತ್ತೇನೆ” ಎಂದು ತಮ್ಮ ಅಭಿಮಾನಿಗಳಿಗೆ ಥ್ಯಾಂಕ್ಸ್ ಹೇಳಿ ಕ್ಯಾಪ್ಶನ್ ಬರೆದಿದ್ದಾರೆ.

ಕಿರಿಕ್ ಪಾರ್ಟಿ ಚಿತ್ರದ ಮೂಲಕ ಪ್ರಸಿದ್ಧರಾದ ರಶ್ಮಿಕಾ ಬಹು ಭಾಷಾ ನಟಿಯಾಗಿ ಈಗ ದಕ್ಷಿಣ ಭಾರತದಲ್ಲಿ ಅತಿ ಬ್ಯುಸಿ ಶೆಡ್ಯೂಲ್ ಹೊಂದಿದವರು. ಸದ್ಯ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅವರ ಜತೆ ಪುಷ್ಪಾ ಚಿತ್ರದಲ್ಲಿ ನಟಿಸಿದ್ದಾರೆ. ಸಿದ್ಧಾರ್ಥ್ ಮಲ್ಹೋತ್ರಾ ಇರುವ ಮಿಷನ್ ಮಂಜು ಚಿತ್ರದ ಜತೆ ಬಾಲಿವುಡ್ ಗೂ ಎಂಟ್ರಿ ಕೊಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...