ಧಾರವಾಡ: ಕೋವಿಡ್ ಪರೀಕ್ಷೆ ಮಾಡಿಸಿಕೊಂಡವರಿಗೆ ಮಾತ್ರ ಪಡಿತರ ನೀಡಲು ಮುಂದಾಗಿರುವುದು ಗ್ರಾಮದ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಧಾರವಾಡ ಜಿಲ್ಲೆ ಅಣ್ಣಿಗೇರಿ ತಾಲೂಕಿನ ನಲವಡಿ ಗ್ರಾಮದಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದವರಿಗೆ ಮಾತ್ರ ಪಡಿತರ ನೀಡಲಾಗುವುದು ಎಂಬ ಅಲಿಖಿತ ನಿಯಮ ಜಾರಿಗೆ ತರಲಾಗಿದೆ. ಇದರಿಂದಾಗಿ ಗ್ರಾಮದ ಜನರಿಗೆ ಸಮಸ್ಯೆ ಎದುರಾಗಿದೆ ಎನ್ನಲಾಗಿದೆ.
ಗುರುತಿಸಲ್ಪಡುವ ವ್ಯಕ್ತಿಗಳು ಕೊರೋನಾ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕೆಂದು ಸರ್ಕಾರ ಆದೇಶಿಸಿದೆ. ಇದೇ ವೇಳೆ ನಲವಡಿ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ಬಳಿಯಲ್ಲಿ ಕೊರೋನಾ ಪರೀಕ್ಷೆ ನಡೆಸುತ್ತಿದ್ದು ಟೆಸ್ಟ್ ಬಳಿಕ ರೇಷನ್ ಕೊಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕೊರೊನಾ ಟೆಸ್ಟ್ ಕಡ್ಡಾಯ ಮಾಡಿರುವುದರಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ ಎಂದು ಹೇಳಲಾಗಿದೆ.