ಬೆಂಗಳೂರು: ಪಡಿತರ ಚೀಟಿ ಇಲ್ಲದವರಿಗೆ ಗರೀಬ್ ಕಲ್ಯಾಣ್ ಯೋಜನೆ ವಿಸ್ತರಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಜಾರಿಗೆ ತಂದಿದೆ. ರಾಜ್ಯದಲ್ಲಿ ಪಡಿತರ ಚೀಟಿ ಇಲ್ಲದವರಿಗೆ ಯೋಜನೆಯನ್ನು ವಿಸ್ತರಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆಯಲ್ಲಿ ಈ ಕುರಿತಾಗಿ ಸೂಚನೆ ನೀಡಿದೆ.
ಕೊರೋನಾ ಕಾರಣದಿಂದ ಸಂಕಷ್ಟದಲ್ಲಿರುವ ಜನರಿಗೆ ಅನುಕೂಲವಾಗುವಂತೆ ಬಡವರಿಗೆ ತಲಾ 5 ಕೆಜಿ ಅಕ್ಕಿ ಮತ್ತು ಒಂದು ಕೆಜಿ ಬೇಳೆ ವಿತರಿಸಲು ನವಂಬರ್ ವರೆಗೆ ಗರೀಬ್ ಕಲ್ಯಾಣ್ ಯೋಜನೆಯನ್ನು ವಿಸ್ತರಿಸಲಾಗಿದೆ.