alex Certify ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಪೋರ್ಟಬಿಲಿಟಿ ಮೂಲಕ ಇರುವ ಸ್ಥಳದಲ್ಲೇ ರೇಷನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಪೋರ್ಟಬಿಲಿಟಿ ಮೂಲಕ ಇರುವ ಸ್ಥಳದಲ್ಲೇ ರೇಷನ್

ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯಡಿ ಹೊರರಾಜ್ಯದವರಿಗೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಲಾಕ್ ಡೌನ್ ಜಾರಿಯಾದ ನಂತರ ರಾಜ್ಯದಲ್ಲಿ ಹೊರರಾಜ್ಯದ ಸುಮಾರು 500ಕ್ಕೂ ಹೆಚ್ಚು ಕಾರ್ಡುದಾರರು ಪಡಿತರ ಪಡೆದಿದ್ದಾರೆ.

ಒನ್ ನೇಷನ್ ಒನ್ ರೇಷನ್ ಯೋಜನೆಯಡಿ ಹೊರ ರಾಜ್ಯದಲ್ಲಿ ವಾಸಿಸುತ್ತಿರುವ ವಲಸೆ ಕಾರ್ಮಿಕರು ತಾವು ಇರುವ ಸ್ಥಳದಲ್ಲಿ ಮೂಲ ರಾಜ್ಯದ ರೇಷನ್ ಕಾರ್ಡ್ ತೋರಿಸಿ ಪೋರ್ಟಬಿಲಿಟಿ ಮೂಲಕ ಪಡಿತರ ಪಡೆದುಕೊಳ್ಳಬಹುದಾಗಿದೆ.

ಲಾಕ್ಡೌನ್ ಜಾರಿಯಾದ ಅವಧಿಯಲ್ಲಿ ಪೋರ್ಟಬಿಲಿಟಿ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳಿಂದ ಗೋವಾ, ತೆಲಂಗಾಣ, ಆಂಧ್ರಪ್ರದೇಶ, ಕೇರಳ, ಮಹಾರಾಷ್ಟ್ರದ 500ಕ್ಕೂ ಹೆಚ್ಚು ಮಂದಿ ರಾಜ್ಯದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆದುಕೊಂಡಿದ್ದಾರೆ.

ಅದೇ ರೀತಿ ಬೇರೆ ಜಿಲ್ಲೆ, ತಾಲೂಕುಗಳಲ್ಲಿ ವಾಸವಾಗಿದ್ದವರು ಕೂಡ ಇರುವ ಸ್ಥಳದಲ್ಲಿ ಪೋರ್ಟಬಿಲಿಟಿ ವ್ಯವಸ್ಥೆ ಮೂಲಕ ಪಡಿತರ ಪಡೆಯಲು ಅವಕಾಶ ಇರುತ್ತದೆ. ಇದನ್ನು ಬಳಸಿಕೊಂಡು ಅಪಾರ ಸಂಖ್ಯೆಯ ಜನ ನಿಗದಿತ ಪ್ರಮಾಣದ ಆಹಾರ ಧಾನ್ಯ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...