ಬೆಂಗಳೂರು: ಉಚಿತವಾಗಿ ನೀಡಲಾಗುತ್ತಿರುವ ಆಹಾರಧಾನ್ಯಗಳನ್ನು ಮಾರ್ಚ್ ವರೆಗೂ ವಿಸ್ತರಿಸಬೇಕೆಂದು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಒತ್ತಾಯಿಸಿದೆ.
ಕೊರೊನಾ ಸೋಂಕು ಉಲ್ಭಣಗೊಂಡ ಹಿನ್ನೆಲೆಯಲ್ಲಿ ವಿಶೇಷ ಯೋಜನೆಯಡಿ ಉಚಿತವಾಗಿ ಪಡಿತರ ಆಹಾರ ಧಾನ್ಯ ವಿತರಿಸಲಾಗುತ್ತಿದೆ. ಇದನ್ನು ಮಾರ್ಚ್ ವರೆಗೂ ವಿಸ್ತರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ.
ಕೇಂದ್ರ ಸರ್ಕಾರ ನವೆಂಬರ್ ವರೆಗೆ ಉಚಿತವಾಗಿ ಆಹಾರಧಾನ್ಯಗಳನ್ನು ವಿತರಿಸುವುದಾಗಿ ಹೇಳಿದೆ. ಕೊರೋನಾ ಕಾರಣದಿಂದ ಜನ ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಮಾರ್ಚ್ ವರೆಗೆ ಯೋಜನೆ ಮುಂದುವರಿಸಬೇಕೆಂದು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷ ಟಿ. ಕೃಷ್ಣಪ್ಪ ಮೋದಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಮೂರು ತಿಂಗಳಿನಿಂದ ಪಡಿತರ ವಿತರಕರಿಗೆ ತಡೆಹಿಡಿಯಲಾಗಿದ್ದ ಕಮಿಷನ್ ಬಾಕಿಯನ್ನು ಬಿಡುಗಡೆ ಮಾಡಬೇಕು. ಆರ್ಥಿಕ ಚಟುವಟಿಕೆ ಕುಂಠಿತಗೊಂಡು ಜನ ಸಂಕಷ್ಟದಲ್ಲಿರುವ ಹಿನ್ನಲೆಯಲ್ಲಿ ಮಾರ್ಚ್ ವರೆಗೆ ಉಚಿತವಾಗಿ ಆಹಾರಧಾನ್ಯ ಒದಗಿಸಬೇಕೆಂದು ಕೋರಿದ್ದಾರೆ.