alex Certify ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮದ ಬಳಿ ಕಾರ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರು ಲಿಂಗಸಗೂರು ತಾಲ್ಲೂಕಿನ ದೇವರಬೂಪುರು ಗ್ರಾಮದ ನಿವಾಸಿಗಳೆಂದು ಹೇಳಲಾಗಿದ್ದು ಅಂತ್ಯಸಂಸ್ಕಾರಕ್ಕೆ ಹೋಗಿಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರ್ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿ ಮೃತಪಟ್ಟಿದ್ದು ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಅಪಘಾತದ ತೀವ್ರತೆಗೆ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...