ರಾಯಚೂರು: ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆಯಾದ ನಂತರ ಬಸ್ ಸಂಚಾರ ಆರಂಭವಾಗಿದೆ. ಈಗಾಗಲೇ ಬಹುತೇಕ ಮಾರ್ಗಗಳಲ್ಲಿ ಬಸ್ ಸೇವೆ ಒದಗಿಸಲಾಗುತ್ತಿದೆ. ಮುಂದಿನ ಹಂತದಲ್ಲಿ ಬೇರೆ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲಾಗುವುದು.
ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಈ ಕುರಿತು ಮಾಹಿತಿ ನೀಡಿದ್ದು, ಮಹಾರಾಷ್ಟ್ರ ಹೊರತುಪಡಿಸಿ ಉಳಿದ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ.
ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಮತ್ತು ಗೋವಾ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸುವ ಕುರಿತು ಪತ್ರ ಬರೆಯಲಾಗಿದ್ದು, ಶೀಘ್ರದಲ್ಲೇ ಅಂತರಾಜ್ಯ ಸಂಚಾರ ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.