
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಪೈದೊಡ್ಡಿ ಗ್ರಾಮ ಪಂಚಾಯಿತಿ ಸದಸ್ಯ ಹನುಮಂತ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಗೌಡೂರು – ಗುರಗುಂಟ ಗ್ರಾಮದ ಬಳಿ ಘಟನೆ ನಡೆದಿದೆ. ಹನುಮಂತ ಬೈಕ್ ನಲ್ಲಿ ಬರುತ್ತಿದ್ದ ವೇಳೆಯಲ್ಲಿ ದಾಳಿ ಮಾಡಿದ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.