ಆಪರೇಷನ್ ಕಮಲ ಕುರಿತಂತೆ ದೇಶದಾದ್ಯಂತ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಹತ್ವದ ಹೇಳಿಕೆ ನೀಡಿದ್ದಾರೆ. ರಾಮರಾಜ್ಯ ಸ್ಥಾಪನೆಗೆ ಆಪರೇಷನ್ ಕಮಲ ಮಾಡಲು ಬಿಜೆಪಿ ಸಿದ್ಧ ಎಂದು ಹೇಳಿದ್ದಾರೆ.
ನೂತನವಾಗಿ ವಿಧಾನಪರಿಷತ್ತಿಗೆ ನಾಮ ನಿರ್ದೇಶನಗೊಂಡ ಶಾಂತಾರಾಮ ಸಿದ್ಧಿ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಮಹಾತ್ಮ ಗಾಂಧಿಯವರ ರಾಮರಾಜ್ಯದ ಪರಿಕಲ್ಪನೆ ಸಾಕಾರಗೊಳಿಸಲು ಬಿಜೆಪಿ ಕಾರ್ಯೋನ್ಮುಖವಾಗಿದೆ ಎಂದಿದ್ದಾರೆ.
ಇದರ ಅನುಷ್ಠಾನಕ್ಕೆ ಸಂಖ್ಯಾಬಲದ ಕೊರತೆ ಇದ್ದ ಸಂದರ್ಭದಲ್ಲಿ ಆಪರೇಷನ್ ಕಮಲ ಮಾಡಲು ಪಕ್ಷ ಸಿದ್ಧವಿದೆ ಎಂದು ಹೇಳಿದ ಅವರು, ಕುಟುಂಬ ರಾಜಕಾರಣ ವ್ಯಾಪಕವಾಗಿರುವ ಸಂದರ್ಭದಲ್ಲಿ ಬಿಜೆಪಿ ಮಾತ್ರ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಸ್ಥಾನಮಾನ ನೀಡುತ್ತಿದೆ ಎಂದು ತಿಳಿಸಿದ್ದಾರೆ.