alex Certify ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ, ನೇಮಕಾತಿ ನಾನಾ ಹಂತದಲ್ಲಿರುವ ಅಭ್ಯರ್ಥಿಗಳಿಗೆ ಶಾಕಿಂಗ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ, ನೇಮಕಾತಿ ನಾನಾ ಹಂತದಲ್ಲಿರುವ ಅಭ್ಯರ್ಥಿಗಳಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಕೊರೋನಾ ಆರ್ಥಿಕ ಸಂಕಷ್ಟದ ಕಾರಣ ಉದ್ಯೋಗ ವಲಯದ ಮೇಲೆ ಪರಿಣಾಮ ಉಂಟಾಗಿದೆ.

ಆರ್ಥಿಕ ಸಂಕಷ್ಟದ ಕಾರಣ ಆರ್ಥಿಕ ಮಿತವ್ಯಯ ಪಾಲಿಸಲು 2020 -21ರ ಉದ್ಯೋಗ ನೇಮಕಾತಿಗೆ ತಡೆ ನೀಡಲಾಗಿದೆ. ಬ್ಯಾಕ್ಲಾಗ್ ಹುದ್ದೆಗಳು, ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು ಸೇರಿದಂತೆ ಎಲ್ಲ ನೇರ ನೇಮಕಾತಿ ಹುದ್ದೆಗಳ ಭರ್ತಿಗೆ ತಡೆ ನೀಡಿ ಕಳೆದ ಜುಲೈ 6 ರಂದು ರಾಜ್ಯ ಸರ್ಕಾರ ಆದೇಶಿಸಿದೆ. ಈಗ ನೇರ ನೇಮಕಾತಿ ಹುದ್ದೆಗಳಿಗೂ ಇದು ಅನ್ವಯವಾಗುತ್ತದೆ ಎಂದು ಹೇಳಲಾಗಿದೆ.

ಹಣಕಾಸು ಇಲಾಖೆಯ ಕಾರ್ಯದರ್ಶಿಯವರು ಶುಕ್ರವಾರ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆರ್ಥಿಕ ಇಲಾಖೆ ಅನುಮತಿ ಪಡೆದು ನೇಮಕಾತಿಯ ನಾನಾ ಹಂತಗಳಲ್ಲಿರುವ ಹುದ್ದೆಗಳಿಗೂ ಇದು ಅನ್ವಯವಾಗುತ್ತದೆ. ನೇಮಕಾತಿ ಆದೇಶ ಬಾಕಿ ಇರುವ ಪ್ರಕರಣದಲ್ಲಿ ಮಾತ್ರ ನೇಮಕಾತಿ ಆದೇಶ ನೀಡಬಹುದೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...