alex Certify ತಾತ್ಕಾಲಿಕ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಆರೋಗ್ಯ ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಾತ್ಕಾಲಿಕ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಆರೋಗ್ಯ ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ

ಕೋಲಾರ: ಕೋವಿಡ್-19 ವ್ಯಾಪಕವಾಗಿ ಹೆಚ್ಚಾಗುತ್ತಿರುವ ಕೊರೋನಾ ವೈರಸ್ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ಅನುಕೂಲವಾಗುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಒಟ್ಟು 107 ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ 6 ತಿಂಗಳ ಮಟ್ಟಿಗೆ ನೇರ ಸಂದರ್ಶನ (Walk-in-Interview) ಮೂಲಕ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗಳಿಗೆ ಹಾಜರಾಗುವ ಅಭ್ಯರ್ಥಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಕೋಲಾರ ಇಲ್ಲಿಗೆ ತಮ್ಮ ಬಯೋಡೇಟ ಮತ್ತು ಮೂಲ ದಾಖಲೆಗಳೊಂದಿಗೆ ಅಕ್ಟೋಬರ್ 9 ರಂದು ಬೆಳಿಗ್ಗೆ 11.00 ಗಂಟೆಗೆ ಹಾಜರಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...