
ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನ್ಯಾಸಕರ ನೇಮಕಾತಿ ಆದೇಶ ವಿತರಿಸಲು ಜುಲೈ 8 ರಂದು ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯಲಿದೆ.
ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗೆ ಆಯ್ಕೆಯಾಗಿ ನೇಮಕಾತಿ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಜುಲೈ 8 ರಂದು ನೇಮಕಾತಿ ಆದೇಶ ವಿತರಿಸಲು ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸುವಂತೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.
ಕೊರೋನಾ ಸಂದರ್ಭದಲ್ಲಿ ಸಾಮಾಜಿಕ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಬೇಕೆಂದು ತಿಳಿಸಿದ್ದು, ಉದ್ದೇಶಿತ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಆದಷ್ಟು ಆನ್ಲೈನ್ ಮೂಲಕ ನಿರ್ವಹಿಸಿ ನೇಮಕಾತಿ ಆದೇಶಗಳನ್ನು ವಿತರಿಸಲು ಕ್ರಮ ಕೈಗೊಳ್ಳುವಂತೆ ಪದವಿಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕರಿಗೆ ಸೂಚಿಸಿದ್ದಾರೆ.