alex Certify ಬಿಗ್ ನ್ಯೂಸ್: ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ಪ್ರಕಟ

ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಗಳ ಮೀಸಲಾತಿ ವಿವಾದಕ್ಕೆ ಮುಕ್ತಿ ಸಿಕ್ಕಿದ್ದು ಸ್ಥಳೀಯ ಸಂಸ್ಥೆಗಳಿಗೆ ಸದ್ಯವೇ ಪೌರಾಡಳಿತ ಭಾಗ್ಯ ಸಿಗಲಿದೆ.

ರಾಜ್ಯಪಾಲರಿಂದ ಅಂಗೀಕಾರ ದೊರೆತ ನಂತರ ರಾಜ್ಯ ಸರ್ಕಾರದ ಅಧಿಕೃತ ರಾಜ್ಯಪತ್ರದಲ್ಲಿ ರಾಜ್ಯ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ಪಟ್ಟಿ ಪ್ರಕಟಿಸಲಾಗಿದೆ. ಪೌರಾಡಳಿತ ಇಲಾಖೆ ಮೀಸಾತಿ ಕುರಿತಾಗಿ ಆದೇಶ ಹೊರಡಿಸಿದೆ.

276 ಪೌರಾಡಳಿತ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿಯಾಗಿದೆ. 2018 ರ ಆಗಸ್ಟ್ ನಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದಿತ್ತು. ಸೆಪ್ಟೆಂಬರ್ 3 ರಂದು ಮೀಸಲಾತಿ ಪ್ರಕಟಿಸಿದ್ದು ವಿವಾದಕ್ಕೀಡಾಗಿ ಹೈಕೋರ್ಟ್ ಮೆಟ್ಟಿಲೇರಿತ್ತು. ಹೈಕೋರ್ಟ್ ನಲ್ಲಿ ವಿವಾದ ಬಗೆಹರಿದ ನಂತರ ಮೀಸಲಾತಿ ಪ್ರಕಟಿಸಲಾಗಿದೆ. ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಗಳಿಗೆ ಚುನಾವಣೆ ನಡೆಸಲು ಕ್ರಮ ಕೈಗೊಳ್ಳುವಂತೆ ಸೂಚನಾ ಪತ್ರ ಕಳುಹಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...